ಉಧಂಪುರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.
ಈ ಘಟನೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಖಾನಿ ಚೌಕ್ ಚೆಕ್‌ಪೋಸ್ಟ್‌ನಲ್ಲಿ ಕಾನ್‌ಸ್ಟೆಬಲ್‌ಕಾಕಾ ರಾಮ್ ಮತ್ತು ವಿಶೇಷ ಪೊಲೀಸ್ ಅಧಿಕಾರಿ ಮನೋಹರ್‌ಲಾಲ್ ಅವರನ್ನು ನಿಯೋಜಿಸಲಾಗಿತ್ತು. ಯಾವುದೋ ವಿಷಯಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಮನೋಹರ್ ಲಾಲ್ ಸರ್ವಿಸ್ ರೈಫಲ್‌ನಿಂದ ರಾಮ್ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
‘ರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ಧಾರೆ. ಸದ್ಯ ಮನೋಹರ್ ಲಾಲ್ ಅವರನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.