ADVERTISEMENT

ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಮೇಲೆ ಕಾನ್‌ಸ್ಟೆಬಲ್‌ನಿಂದಲೇ ಅತ್ಯಾಚಾರ

ಪಿಟಿಐ
Published 16 ಮಾರ್ಚ್ 2024, 23:35 IST
Last Updated 16 ಮಾರ್ಚ್ 2024, 23:35 IST
....
....   

ಜಲೌನ್‌: ಉತ್ತರ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಅವರ ಸಹೋದ್ಯೋಗಿಯೇ ಅತ್ಯಾಚಾರ ಮಾಡಿದ್ದಾನೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಪೇದೆ ಕರಮ್‌ವೀರ್ ಸಿಂಗ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಮತ್ತು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಶುಕ್ರವಾರ ನೀಡಿದ ದೂರಿನ ತನಿಖೆಗಾಗಿ ಒಂದು ಸಮಿತಿಯನ್ನು ರಚಿಸಿದ್ದೆವು. ಸಮಿತಿ ನೀಡಿದ ವರಧಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಸೀಮ್ ಚೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT