ADVERTISEMENT

ಕಾಶ್ಮೀರ: ರಾಜಕೀಯ ಚಟುವಟಿಕೆ ಚುರುಕು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 1:46 IST
Last Updated 15 ಸೆಪ್ಟೆಂಬರ್ 2019, 1:46 IST
   

ಶ್ರೀನಗರ: ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಆರು ವಾರಗಳಿಂದ ಗೃಹಬಂಧನದಲ್ಲಿದ್ದರೂ, ಶೀಘ್ರದಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗುವ ಸಾಧ್ಯತೆ ಗೋಚರಿಸಿದೆ.

ನ್ಯಾಷನಲ್‌ ಕಾನ್ಫರೆನ್ಸ್‌ನ (ಎನ್‌ಸಿ) ಸಂಸದರಾದ ಮೊಹಮ್ಮದ್‌ ಅಕ್ಬರ್‌ ಲೋನ್‌ ಹಾಗೂ ಹಸನೈನ್‌ ಮಸೂದಿ ಅವರು ಗೃಹಬಂಧನದಲ್ಲಿರುವ ಪಕ್ಷದ ಫಾರೂಕ್‌ ಅಬ್ದುಲ್ಲಾ ಹಾಗೂ ಒಮರ್‌ ಅಬ್ದುಲ್ಲಾ ಅವರನ್ನು ಈಚೆಗೆ ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ. ಹೈಕೋರ್ಟ್‌ ಸೂಚನೆಯ ಮೇರೆಗೆ ಈ ಭೇಟಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಮಾತುಕತೆಗೆ ವ್ಯವಸ್ಥೆ ಮಾಡಿಕೊಡುವಂತೆ ಕೋರ್ಟ್‌ ಶ್ರೀನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು. ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಬಾರದು ಎಂದು ಸಂಸದರಿಗೆ ಸೂಚನೆ ನೀಡಿತ್ತು.

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಹೆಚ್ಚುತ್ತಿದೆ ಎಂದು ಸಂಸದರು ಪಕ್ಷದ ಅಧ್ಯಕ್ಷ ಫಾರೂಕ್‌ ಅವರಿಗೆ ಹೇಳಿದ್ದಾರೆ. ಆದರೆ ರಾಜೀನಾಮೆ ನೀಡಬೇಡಿ ಎಂದು ಅಬ್ದುಲ್ಲಾ ಅವರು ಸೂಚಿಸಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.