ADVERTISEMENT

ಲಾಲು ನೇತೃತ್ವದ ಆರ್‌ಜೆಡಿ ಜತೆ ಎಲ್‌ಜೆಡಿ ವಿಲೀನಗೊಳಿಸಿದ ಶರದ್ ಯಾದವ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮಾರ್ಚ್ 2022, 9:50 IST
Last Updated 20 ಮಾರ್ಚ್ 2022, 9:50 IST
ಶರದ್ ಯಾದವ್ ಮತ್ತು ಲಾಲು ಪ್ರಸಾದ್ ಯಾದವ್ (ಪಿಟಿಐ ಸಂಗ್ರಹ ಚಿತ್ರ)
ಶರದ್ ಯಾದವ್ ಮತ್ತು ಲಾಲು ಪ್ರಸಾದ್ ಯಾದವ್ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ ಪಕ್ಷ ಲೋಕತಾಂತ್ರಿಕ್ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಜತೆ ವಿಲೀನಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಶರದ್ ಯಾದವ್ ಅವರ ದೆಹಲಿಯ ನಿವಾಸದಲ್ಲಿ ಪಕ್ಷಗಳ ವಿಲೀನದ ಬಗ್ಗೆ ಭಾನುವಾರ ಘೋಷಿಸಲಾಯಿತು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ನಮ್ಮ ಪಕ್ಷವನ್ನು ವಿಲೀನಗೊಳಿಸಿರುವುದು ಪ್ರತಿಪಕ್ಷಗಳು ಒಗ್ಗಟ್ಟಾಗುವುದರ ಮೊದಲ ಹಂತ. ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಭಾರತದಾದ್ಯಂತ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕಿದೆ. ಸದ್ಯಕ್ಕೆ ಇದು ನಮ್ಮ ಆದ್ಯತೆಯಾಗಿದೆ. ಆಮೇಲೆ ಪ್ರತಿಪಕ್ಷಗಳ ಮೈತ್ರಿಕೂಟವನ್ನು ಯಾರು ಮುನ್ನಡೆಸಬಹುದು ಎಂಬ ಬಗ್ಗೆ ಯೋಚಿಸಬಹುದು ಎಂದು ಶರದ್ ಯಾದವ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.