ADVERTISEMENT

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಏಕಾಂಗಿ ಸ್ಪರ್ಧೆ -ಅಣ್ಣಾಮಲೈ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜನವರಿ 2022, 14:43 IST
Last Updated 31 ಜನವರಿ 2022, 14:43 IST
ಕೆ. ಅಣ್ಣಾಮಲೈ (ಪಿಟಿಐ ಚಿತ್ರ)
ಕೆ. ಅಣ್ಣಾಮಲೈ (ಪಿಟಿಐ ಚಿತ್ರ)   

ಚೆನ್ನೈ: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದುತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷಕೆ. ಅಣ್ಣಾಮಲೈ ಹೇಳಿದ್ದಾರೆ.

ಬಿಜೆಪಿಯು,ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆಯ ಮಿತ್ರಪಕ್ಷವಾಗಿದೆ.

ಮಾಜಿ ಐಪಿಎಸ್‌ ಅಧಿಕಾರಿಯೂಆಗಿರುವ ಅಣ್ಣಾಮಲೈ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬೂತ್‌ ಮಟ್ಟದಲ್ಲಿ ಮೈತ್ರಿ ಧರ್ಮಕಾಪಾಡಿಕೊಳ್ಳುವುದು ಕಷ್ಟ. 9 ಜಿಲ್ಲೆಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಳಿಕ, ನಮ್ಮ ಸ್ಥಳೀಯ ಕಾರ್ಯಕರ್ತರು ಮತ್ತು ಮುಖಂಡರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವುದಕ್ಕಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ನಾವು ಮಾಡಿರುವ ಮನವಿಯನ್ನು ಎಐಎಡಿಎಂಕೆ ಗೌರವಿಸಿದೆ. ಆದರೆ, ನಮ್ಮ ಬೂತ್‌ ಮಟ್ಟದ ನಾಯಕರಿಗೆ ಅವಕಾಶ ಕಲ್ಪಿಸಿಕೊಡುವ ಅಗತ್ಯವಿದೆ. ಹಾಗಾಗಿ,ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ADVERTISEMENT

ಮುಂದುವರಿದು, ಚುನಾವಣೆ ಸಂಬಂಧ ಮೂರು-ನಾಲ್ಕು ಬಾರಿ ನಡೆಸಿದ ಸಭೆ ವೇಳೆ,ಕ್ಷೇತ್ರ ಹಂಚಿಕೆ ಮಾತುಕತೆಗೆ ಒಪ್ಪಿಕೊಳ್ಳುವುದು ಸಮಂಜಸವಲ್ಲ ಎನಿಸಿದೆ. ಹಾಗಾಗಿ ಪರಸ್ಪರಮಾತುಕತೆ ನಡೆಸಿಯೇ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದೂ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವು ಫೆಬ್ರುವರಿ22ರಂದು ಹೊರ ಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.