ADVERTISEMENT

ಫಲಿತಾಂಶದಿಂದ ಸರ್ಕಾರಗಳಿಗೆ ಅಪಾಯವಿಲ್ಲ, ಆದರೆ ಪ್ರಮುಖ ಪಕ್ಷಗಳ ಮೇಲೆ ಪರಿಣಾಮ–ವರದಿ

ಇಂದು 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳು, 3 ಲೋಕಸಭೆ, ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಉಪಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 19:30 IST
Last Updated 29 ಅಕ್ಟೋಬರ್ 2021, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 13 ರಾಜ್ಯಗಳ 29 ವಿಧಾನಸಭೆ ಕ್ಷೇತ್ರಗಳು, 3 ಲೋಕಸಭೆ ಕ್ಷೇತ್ರಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರ ಉಪಚುನಾವಣೆ ನಡೆಯಲಿದೆ.

ಆದರೆ ಇದರಿಂದ ಅಲ್ಲಿನ ಸರ್ಕಾರಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ಚುನಾವಣಾ ಫಲಿತಾಂಶಗಳು ಕರ್ನಾಟಕ, ರಾಜಸ್ಥಾನ, ತೆಲಂಗಾಣ, ಹರಿಯಾಣ, ಬಿಹಾರ್ ಮತ್ತು ಅಸ್ಸಾಂ ರಾಜ್ಯಗಳಲ್ಲಿನ ಪ್ರಮುಖ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

29 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 10 ಮತ್ತು ಬಿಜೆಪಿಯು 6 ಕ್ಷೇತ್ರಗಳಲ್ಲಿ ಅಧಿಕಾರ ಹೊಂದಿವೆ. ಜೆಡಿಯು ಮತ್ತು ತೃಣಮೂಲ ಕಾಂಗ್ರೆಸ್‌ ಹಾಗೂ ಜೆಡಿಯು ಮತ್ತು ತೃಣಮೂಲ ಕಾಂಗ್ರೆಸ್‌ ತಲಾ ಎರಡು ಕ್ಷೇತ್ರಗಳನ್ನು ಹಂಚಿಕೊಂಡಿವೆ. ಕಳೆದ ಬಾರಿಯ ಚುನಾವಣೆಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳ ಪೈಕಿ ಎರಡರಲ್ಲಿ ಬಿಜೆಪಿ ಗೆದ್ದರೆ ಮೂರನೇ ಸ್ಥಾನವನ್ನು ಕಾಂಗ್ರೆಸ್‌ ಜಯಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.