ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಎನ್‌ಸಿಪಿಯ ಶರದ್ ಬಣ ಮತ್ತು ಅಜಿತ್ ಬಣ ವಿಲೀನಗೊಳ್ಳಲಿವೆ ಅಥವಾ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಚರ್ಚೆಗೆ ತೆರೆ ಎಳೆದಿರುವ ಹಿರಿಯ ನಾಯಕ ಶರದ್ ಪವಾರ್, ‘ಅವಕಾಶವಾದಿಗಳ ಜೊತೆ ಕೈಜೋಡಿಸುವುದಿಲ್ಲ’ ಎಂದು ಹೇಳಿದ್ದಾರೆ.
ಪುಣೆಯಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಶರದ್, ‘ಅಧಿಕಾರಕ್ಕಾಗಿ ಬಿಜೆಪಿ ಜೊತೆ ಹೋದವರನ್ನು ಮತ್ತೆ ನಮ್ಮ ಜೊತೆ ಸೇರಿಸಿಕೊಳ್ಳುವುದಿಲ್ಲ. ಗಾಂಧಿ, ನೆಹರೂ, ಫುಲೆ, ಶಾಹು ಮತ್ತು ಅಂಬೇಡ್ಕರ್ ಚಿಂತನೆಗಳೊಂದಿಗೆ ಇರುವವರನ್ನು ಮಾತ್ರ ನಮ್ಮೊಂದಿಗೆ ಕರೆದೊಯ್ಯುತ್ತೇವೆ’ ಎಂದು ಹೇಳಿದ್ದಾರೆ.
ಶರದ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ‘ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.