ADVERTISEMENT

ಮಣಿಪುರದ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆ

ಪಿಟಿಐ
Published 8 ನವೆಂಬರ್ 2021, 8:57 IST
Last Updated 8 ನವೆಂಬರ್ 2021, 8:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮಣಿಪುರದ ಇಬ್ಬರು ಶಾಸಕರು ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಯಾದರು.

ಕಾಂಗ್ರೆಸ್‌ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಪ್ರಮುಖ ರಾಜಕೀಯ ಕುಟುಂಬವೊಂದರ ಸದಸ್ಯರಾದ ರಾಜ್‌ಕುಮಾರ್ ಇಮೊ ಸಿಂಗ್‌ ಮತ್ತು ಕಾಂಗ್ರೆಸ್‌ ಶಾಸಕ ಯಮ್‌ಥಾಂಗ್‌ ಹಾಕಿಪ್‌, ಕೇಂದ್ರ ಸಚಿವ ಸರ್ವಾನಂದ ಸೋನಾವಾಲ್ ಮತ್ತು ಮಣಿಪುರದಲ್ಲಿ ಪಕ್ಷದ ಉಸ್ತುವಾರಿಯಾಗಿರುವ ಸಂಬಿತ್‌ ಪಾತ್ರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ರಾಜ್‌ಕುಮಾರ್ ಇಮೊ ಸಿಂಗ್‌ ಕೂಡ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಪಕ್ಷ ಅವರನ್ನು ಅಮಾನತುಗೊಳಿಸಿತ್ತು. ಇಮೊ ಸಿಂಗ್ ಅವರ ತಂದೆ ರಾಜ್‌ಕುಮಾರ್ ಜೈಚಂದ್ರ ಸಿಂಗ್‌ ಮಣಿಪುರದ ಮುಖ್ಯಮಂತ್ರಿಯಾಗಿ, ಕೇಂದ್ರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.