ADVERTISEMENT

ಅಸ್ಸಾಂ ವಿಧಾನಸಭೆಯಲ್ಲಿ ‘ಬಹುಪತ್ನಿತ್ವ ನಿಷೇಧ ಮಸೂದೆ’ ಮಂಡನೆ

ಪಿಟಿಐ
Published 25 ನವೆಂಬರ್ 2025, 12:38 IST
Last Updated 25 ನವೆಂಬರ್ 2025, 12:38 IST
<div class="paragraphs"><p>ಹಿಮಂತ ಬಿಸ್ವಾ ಶರ್ಮಾ</p></div>

ಹಿಮಂತ ಬಿಸ್ವಾ ಶರ್ಮಾ

   

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ವಿಧಾನಸಭೆಯಲ್ಲಿ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ಮಂಡಿಸಿದ್ದಾರೆ.

ಅಸ್ಸಾಂನ ಜನಪ್ರಿಯ ಗಾಯಕಿ ಜುಬೀನ್ ಗರ್ಗ್ ಅವರ ಸಾವಿನ ಕುರಿತಾದ ಚರ್ಚೆಯ ಬೆನ್ನಲ್ಲೇ ವಿರೋಧ ಪಕ್ಷಗಳಾದ ಕಾಂಗ್ರೆಸ್, ಸಿಪಿಐ(ಎಂ) ಶಾಸಕರು ಸಭಾತ್ಯಾಗ ಮಾಡಿದ್ದರು. ವಿಪಕ್ಷಗಳ ಶಾಸಕರ ಅನುಪಸ್ಥಿತಿಯಲ್ಲಿ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ–2025 ಅನ್ನು ಮಂಡಿಸಿದ್ದಾರೆ.

ADVERTISEMENT

ಚಳಿಗಾಲದ ಅಧಿವೇಶನದ ಮೊದಲ ದಿನದಂದು ಮಸೂದೆಯನ್ನು ಮಂಡಿಸಲಾಗಿದ್ದು, ಮಸೂದೆಗೆ ಅಂಗೀಕಾರ ಸಿಕ್ಕ ಬಳಿಕ ಚರ್ಚೆ ನಡೆಸಲಾಗುತ್ತದೆ. ಹಾಗೆಯೇ ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುತ್ತದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.

ನವೆಂಬರ್ 10ರಂದು ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಚಿವ‌‌ ಸಂಪುಟ ಸಭೆ ಅನುಮೋದನೆ ದೊರಕಿತ್ತು. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.