ADVERTISEMENT

‘ಉಗ್ರರ ನಿಗ್ರಹಕ್ಕೆ ಪಾಕ್ ಕಟಿಬದ್ಧವಾಗಲಿ’

ಪಿಟಿಐ
Published 11 ಮಾರ್ಚ್ 2019, 19:32 IST
Last Updated 11 ಮಾರ್ಚ್ 2019, 19:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್‌:ಭಯೋತ್ಪಾದಕ ಸಂಘಟನೆಗಳನ್ನು ನಾಶಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಕಟಿಬದ್ಧವಾಗಬೇಕು ಎಂದು ಭಾರತ–ಅಮೆರಿಕ ಒತ್ತಾಯಿಸಿವೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಪಾಕಿಸ್ತಾನ ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮ ಕೈಗೊಂಡಿಲ್ಲ ಎಂಬ ಭಾರತದ ಆರೋಪಕ್ಕೆ ಅಮೆರಿಕ ಸಹಮತ ವ್ಯಕ್ತಪಡಿಸಿತು.ಪುಲ್ವಾಮಾ ದಾಳಿ ನಂತರ, ಭಾರತದ ವಿದೇಶಾಂಗ ನೀತಿ ಮತ್ತು ಭದ್ರತೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಭಯ ನಾಯಕರು ಮಾತುಕತೆ ನಡೆಸಿದರು.

ಇದರ ಜೊತೆಗೆ, ಭಾರತ–ಅಮೆರಿಕದ ದ್ವಿಪಕ್ಷೀಯ ಸಂಬಂಧದಲ್ಲಿ ಸಾಕಷ್ಟು ಸುಧಾರಣೆಯಾಗಿರುವ ಕುರಿತು ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಪುಲ್ವಾಮಾ ದಾಳಿ ನಂತರ, ಉಗ್ರ ನಿಗ್ರಹ ವಿಚಾರದಲ್ಲಿ ಅಮೆರಿಕವು ಭಾರತಕ್ಕೆ ಸಂಪೂರ್ಣ ಬೆಂಬಲ ನೀಡಿದೆ ಎಂದು ಗೋಖಲೆ ಪ್ರಶಂಸೆ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.