ಭದ್ರತಾ ಪಡೆ
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣಗಳನ್ನು ಭೇದಿಸಿದ್ದು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸುರಂಕೋಟೆಯ ಮರ್ಹೋಟೆ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಿವೆ ಎಂದು ಪೊಲೀಸರು ಹೇಳಿದ್ದಾರೆ.
ಕಾರ್ಯಾಚರಣೆ ವೇಳೆ ಸ್ಫೋಟಿಸಲು ಸಿದ್ಧಪಡಿಸಿದ್ದ ಐದು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಐಇಡಿಯನ್ನು ಕಬ್ಬಿಣದ ಬಕೆಟ್ ಮತ್ತು ಮೂರು ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್‌ಗಳಲ್ಲಿ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ವೈರ್‌ಲೆಸ್ ಸೆಟ್‌ಗಳು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟಕಗಳನ್ನು ಸ್ಥಳದಲ್ಲಿಯೇ ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.