ADVERTISEMENT

ಶೀಘ್ರದಲ್ಲೇ ಪೋಪ್ ಫ್ರಾನ್ಸಿಸ್ ಭಾರತ ಭೇಟಿ: ಗೋವಾ ಸಚಿವ

ಪೋಪ್ ಫ್ರಾನ್ಸಿಸ್ ಅವರು ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಗೋವಾ ಸಾರಿಗೆ ಸಚಿವ ಮೌವಿನ್ ಗೊಡಿನೋ ಅವರು ತಿಳಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 10:42 IST
Last Updated 3 ಡಿಸೆಂಬರ್ 2024, 10:42 IST
<div class="paragraphs"><p>ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪೋಪ್ ಫ್ರಾನ್ಸಿಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕೈಹಿಡಿದರು ಸಾಗಿದರು. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೊನಿ, ಟರ್ಕಿ ಅಧ್ಯಕ್ಷ ರೆಸಿಪ್ ತಯ್ಯಿಪ್ ಎರ್ಡೊಗನ್ ಇದ್ದಾರೆ</p></div>

ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪೋಪ್ ಫ್ರಾನ್ಸಿಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕೈಹಿಡಿದರು ಸಾಗಿದರು. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೊನಿ, ಟರ್ಕಿ ಅಧ್ಯಕ್ಷ ರೆಸಿಪ್ ತಯ್ಯಿಪ್ ಎರ್ಡೊಗನ್ ಇದ್ದಾರೆ

   

ಪಿಟಿಐ ಸಂಗ್ರಹ ಚಿತ್ರ

ಪಣಜಿ: ರೋಮನ್ ಕ್ಯಾಥೋಲಿಕ್ ಚರ್ಚ್‌ನ ‍ಪ್ರಧಾನ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಗೋವಾ ಸಾರಿಗೆ ಸಚಿವ ಮೌವಿನ್ ಗೊಡಿನೋ ಅವರು ತಿಳಿಸಿದ್ದಾರೆ.

ADVERTISEMENT

ಪಣಜಿಯಲ್ಲಿ ನಡೆಯುತ್ತಿರುವ ಸೇಂಟ್ ಝೇವಿಯರ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಾವು ಅಂದುಕೊಂಡಕ್ಕಿಂತ ಆದಷ್ಟು ಬೇಗ ಪೋಪ್ ಫ್ರಾನ್ಸಿಸ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿವರಿಸಿದರು.

ಕಳೆದ ಜೂನ್‌ನಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ತೆರಳಿದ್ದ ಪ್ರಧಾನಿ ಮೋದಿ ಅವರು ಪೋಪ್ ಫ್ರಾನ್ಸಿಸ್ ಅವರಿಗೆ ಭಾರತಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಭಾರತಕ್ಕೆ ಬರಲು ಒಪ್ಪಿಕೊಂಡಿರುವ ಅವರು ಇನ್ನೇನು ದಿನಾಂಕವನ್ನಷ್ಟೇ ಘೋಷಣೆ ಮಾಡಬೇಕಿದೆ ಎಂದು ಮೌವಿನ್ ಹೇಳಿದರು.

ಪೋಪ್ ಫ್ರಾನ್ಸಿಸ್ ಅವರ ಭಾರತ ಭೇಟಿಯ ಪಟ್ಟಿಯಲ್ಲಿ ಖಂಡಿತವಾಗಿಯೂ ಗೋವಾ ಇರಲಿದೆ ಎಂದು ಅವರು ತಮ್ಮನ್ನು ಭೇಟಿಯಾದ ಕ್ರಿಶ್ಚಿಯನ್ ಸಮುದಾಯದ ಮುಖಂಡರಿಗೆ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.