ADVERTISEMENT

‘ಎಲ್ಲದಕ್ಕೂ ಸುಪ್ರೀಂಗೆ ಅರ್ಜಿ ಸಲ್ಲಿಕೆಯಿಂದ ಪರಿಹಾರ ಸಿಗದು’

ಪಿಟಿಐ
Published 1 ಅಕ್ಟೋಬರ್ 2022, 3:00 IST
Last Updated 1 ಅಕ್ಟೋಬರ್ 2022, 3:00 IST
   

ನವದೆಹಲಿ: ‘ಸಮಾಜದಲ್ಲಿ ಎಲ್ಲ ಸಂದರ್ಭಗಳಲ್ಲಿಯೂ ಕೆಲವೊಂದು ಸಮಸ್ಯೆಗಳು ಇರುತ್ತವೆ. ನೇರವಾಗಿ ಸುಪ್ರೀಂ ಕೋರ್ಟ್ ಕದ ತಟ್ಟುವುದರಿಂದ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದು’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಇದೇ ಸಂದರ್ಭದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಂದುವರಿಸಲು ನಿರಾಸಕ್ತಿಯನ್ನು ವ್ಯಕ್ತಪಡಿಸಿತು ಹಾಗೂ ಈ ಸಂಬಂಧ ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ನಿರಾಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT