ADVERTISEMENT

ಆರು ತಿಂಗಳ ಚಳಿಗಾಲದ ವಿರಾಮದ ಬಳಿಕ ತೆರೆದ ಕೇದಾರನಾಥ ದೇಗುಲದ ಬಾಗಿಲು

ಪಿಟಿಐ
Published 17 ಮೇ 2021, 7:43 IST
Last Updated 17 ಮೇ 2021, 7:43 IST
ಕೇದಾರನಾಥ ದೇಗುಲ
ಕೇದಾರನಾಥ ದೇಗುಲ   

ಡೆಹ್ರಾಡೂನ್:ಆರು ತಿಂಗಳ ಚಳಿಗಾಲದ ವಿರಾಮದ ಬಳಿಕಉತ್ತರಾಖಂಡದ ಕೇದಾರನಾಥ ದೇವಾಲಯದ ಪ್ರವೇಶ ದ್ವಾರವನ್ನು ಸೋಮವಾರ ತೆರೆಯಲಾಗಿದೆ.

ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಸೀಮಿತ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

‘ಬೆಳಿಗ್ಗೆ 5 ಗಂಟೆಗೆ ದೇಗುಲದ ದ್ವಾರಗಳನ್ನು ತೆರೆಯಲಾಗಿದ್ದು, ಅರ್ಚಕರು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಮೊದಲ ಪೂಜೆಯನ್ನು ನಡೆಸಿದರು’ ಎಂದು ಚಾರ್‌ಧಾಮ್‌ ದೇವಸ್ಥಾನಂ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ದೇಗುಲದ ಅರ್ಚಕರು, ದೇವಸ್ಥಾನಂ ಮಂಡಳಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಎಲ್ಲಾ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಲಾಗಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರು, ‘ದೇವಸ್ಥಾನದ ದ್ವಾರಗಳನ್ನು ತೆರೆಯಲಾಗಿದೆ. ದೇವರು ಎಲ್ಲರ ಆರೋಗ್ಯವನ್ನು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ. ಜನರ ಸುರಕ್ಷತೆಯ ದೃಷ್ಟಿಯಿಂದ ಯಾತ್ರೆಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಸಲಾಗಿದೆ. ಭಕ್ತಾಧಿಗಳು ವರ್ಚುವಲ್‌ ವೇದಿಕೆ ಮೂಲಕ ದೇವರ ದರ್ಶನ ಪಡೆಯಬೇಕು’ ಎಂದು ಮನವಿ ಮಾಡಿದ್ದಾರೆ.

‘ಕೋವಿಡ್‌ ಸಾಂಕ್ರಾಮಿಕ ನಿಯಂತ್ರಣಕ್ಕೆ ಬಂದ ಕೂಡಲೇಚಾರ್‌ಧಾಮ್‌ ಯಾತ್ರೆಯನ್ನು ಪುನರಾರಂಭಿಸಲಾಗುವುದು’ ಎಂದು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್‌ ಮಹಾರಾಜ್‌ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.