ನವದೆಹಲಿ: ವಕೀಲರ ಸಂಘಗಳಲ್ಲಿ ನೋಂದಣಿಯಾಗಿರುವ ವಕೀಲೆಯರಿಗೂ ‘ಉದ್ಯೋಗd ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪೋಷ್ ಕಾಯ್ದೆ– 2013) ಅನ್ವಯಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಅರ್ಜಿಯ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಕೀಲರ ಪರಿಷತ್ತಿಗೆ ನೋಟಿಸ್ ಜಾರಿಗೆ ಆದೇಶಿಸಿದರು. ವಕೀಲೆ ಮತ್ತು ಲೇಖಕಿ ಸೀಮಾ ಜೋಶಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
‘ವಕೀಲೆಯರ ದೂರುಗಳ ಕುರಿತು ವಿಚಾರಣೆ ನಡೆಸಲು ಆಂತರಿಕ ದೂರು ಸಮಿತಿಗಳನ್ನು ರಚಿಸುವಂತೆ ನಿರ್ದೇಶನ ನೀಡಬೇಕು. ವಕೀಲರ ಸಂಘಗಳಿಗೆ ಪೋಷ್ ಕಾಯ್ದೆ ಅನ್ವಯಿಸುವ ಬಗ್ಗೆ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ. ಆದ್ದರಿಂದ, ಭಾರತದ ವಕೀಲೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.