ADVERTISEMENT

ಆಸ್ಪತ್ರೆ ಸೇರಲು ಪಾಸಿಟಿವ್‌ ವರದಿ ಕಡ್ಡಾಯವಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ಪಿಟಿಐ
Published 8 ಮೇ 2021, 14:52 IST
Last Updated 8 ಮೇ 2021, 14:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸರ್ಕಾರಿ ಅಥವಾ ಖಾಸಗಿ ಕೋವಿಡ್‌ ಆಸ್ಪತ್ರೆಗೆ ದಾಖಲಿಸುವಾಗ ಪಾಸಿಟಿವ್‌ ವರದಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಸುತ್ತೋಲೆ ಹೊರಡಿಸಿದೆ.

ಸೋಂಕಿತರು ಕೋವಿಡ್ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಇದರ ಅನ್ವಯ ಯಾವುದೇ ರೋಗಿಗೂ ಆರೋಗ್ಯ ಸೇವೆಯನ್ನು ನಿರಾಕರಿಸುವಂತಿಲ್ಲ. ಒಂದು ವೇಳೆ ರೋಗಿ ಬೇರೆ ನಗರದವರಾಗಿದ್ದರೂ ಆಮ್ಲಜನಕ ಅಥವಾ ಔಷಧಿ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಚಿವಾಲಯ ಹೇಳಿದೆ.

ಕೋವಿಡ್‌ನಿಂದ ಬಳಲುತ್ತಿರುವವರಿಗೆ ತ್ವರಿತ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದೆ.ರೋಗಿ ಚಿಕಿತ್ಸೆ ಪಡೆಯಲು ಬಂದ ಪ್ರದೇಶದ ಗುರುತಿನ ಚೀಟಿಯನ್ನು ತೋರಿಸಲು ವಿಫಲರಾದರೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.