ADVERTISEMENT

ಅ. 25ರ ವೇಳೆಗೆ ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿರುವ ಚಂಡಮಾರುತ

ಪಿಟಿಐ
Published 20 ಅಕ್ಟೋಬರ್ 2022, 11:23 IST
Last Updated 20 ಅಕ್ಟೋಬರ್ 2022, 11:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತ ಅ. 25ರ ವೇಳೆಗೆ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತವು ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ತೀವ್ರತೆ ಪಡೆಯಲಿದೆ. ಇದು ಒಡಿಶಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದತ್ತ ಸಾಗಲಿದೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತವು ಪಶ್ಚಿಮ ಹಾಗೂ ವಾಯವ್ಯ ಭಾಗದತ್ತ ಸಾಗಿ, ಆಗ್ನೇಯ ಭಾಗ ಹಾಗೂ ಪೂರ್ವ–ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅ. 22ರ ವೇಳೆಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವುದು. ನಂತರ, 23ರ ವೇಳೆಗೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ತಿಳಿಸಿದೆ.

ADVERTISEMENT

ಅ. 23ರಂದು ಪುರಿ, ಕೇಂದ್ರಪಾಡ ಹಾಗೂ ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭುವನೇಶ್ವರದಲ್ಲಿರುವ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.