ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ದಾರೆ ಎನ್ನಲಾದವರ ಭಾವಚಿತ್ರಗಳನ್ನು ಹೊಂದಿದ್ದ ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡಿರುವ ರಜಾಕಾಲದ ಪೀಠವು ಈ ಕುರಿತು ಗುರುವಾರ ವಿಚಾರಣೆ ನಡೆಸಲಿದೆ ಎಂದು ಉತ್ತರ ಪ್ರದೇಶದ ಅಡ್ವೊಕೇಟ್ ಜನರಲ್ ರಾಘವೇಂದ್ರ ಸಿಂಗ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.