ADVERTISEMENT

ಅಂಚೆಪೇದೆ ನೇಮಕ: ಕನ್ನಡ ಭಾಷೆಯಲ್ಲೂ ಪರೀಕ್ಷೆ

ತಮಿಳುನಾಡಿನ ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 18:30 IST
Last Updated 16 ಜುಲೈ 2019, 18:30 IST
   

ನವದೆಹಲಿ: ಕನ್ನಡ, ತಮಿಳು ಸೇರಿದಂತೆ ದೇಶದ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಅಂಚೆಪೇದೆ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.

ತಮಿಳುನಾಡಿನ ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ,ಜುಲೈ 14ರಂದು ನಡೆದಿದ್ದ ಅಂಚೆಪೇದೆ ನೇಮಕಾತಿ ಪರೀಕ್ಷೆ ರದ್ದುಗೊಳಿಸಿ, ಪ್ರಾದೇಶಿಕ ಭಾಷೆಗಳಲ್ಲಿ ಮತ್ತೆ ಪರೀಕ್ಷೆ ನಡೆಸಲು ನಿರ್ಧರಿಸಿದೆ.ಸಚಿವ ರವಿಶಂಕರ್ ಪ್ರಸಾದ್ ಅವರು ರಾಜ್ಯಸಭೆಗೆ ಮಾಹಿತಿ ನೀಡಿದರು.

ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಮಾತ್ರ ಭಾನುವಾರ ಪರೀಕ್ಷೆ ನಡೆದಿತ್ತು. ಇದರಲ್ಲಿ ತಮಿಳು ಭಾಷೆ ಇರಲಿಲ್ಲ. ‘ಈ ಮೊದಲು ಇಂಗ್ಲಿಷ್ ಜೊತೆ ತಮಿಳು ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಿತ್ತು. ಆದರೆ ಈ ಬಾರಿ ತಮಿಳು ಭಾಷೆಯನ್ನು ಕೈಬಿಡಲಾಗಿದೆ’ಎಂದು ಪಕ್ಷಗಳು ಆಕ್ಷೇಪ ಎತ್ತಿದವು.ಎಐಎಡಿಎಂಕೆ, ಡಿಎಂಕೆ, ಸಿಪಿಐ ಹಾಗೂ ಸಿಪಿಎಂ ಪಕ್ಷಗಳ ಸದಸ್ಯರು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಮಣಿದ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.