ADVERTISEMENT

ನ್ಯಾಯಾಧೀಶರ ಹುದ್ದೆ ಖಾಲಿ ಸುಪ್ರೀಂ ಕೋರ್ಟ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 20:00 IST
Last Updated 22 ಅಕ್ಟೋಬರ್ 2018, 20:00 IST
   

ನವದೆಹಲಿ: ದೇಶದಾದ್ಯಂತ ಜಿಲ್ಲಾ ನ್ಯಾಯಾಲಯಗಳಲ್ಲಿ 22,036 ನ್ಯಾಯಾಧೀಶರ ಹುದ್ದೆಗಳ ಪೈಕಿ 5,133 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಹೀಗೆ ಖಾಲಿ ಬಿಟ್ಟಿರುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಅತೃಪ್ತಿ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರ ಪೀಠವು ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆ ನಡೆಸಿತು. ಈ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಬೇಕಾಗುವ ಸಮಯವನ್ನು ಕಡಿತಗೊಳಿಸಬಹುದೇ ಎಂದು 24 ಹೈಕೋರ್ಟ್‌ಗಳನ್ನು ಕೇಳಿದೆ.

ಉನ್ನತ ಮತ್ತು ಕೆಳ ಹಂತದ ನ್ಯಾಯಾಂಗ ಸೇವೆಯ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ದಿನಾಂಕಗಳು ಮತ್ತು ಪೂರ್ಣಗೊಳ್ಳುವ ನಿರೀಕ್ಷಿತ ದಿನಾಂಕಗಳನ್ನು ಒಳಗೊಂಡ ವಿವರವಾದ ಮಾಹಿತಿಯನ್ನು ಅಕ್ಟೋಬರ್‌ 31ರೊಳಗೆ ನೀಡಲು ಪೀಠವು ಸೂಚಿಸಿತು.ನೇಮಕಾತಿ ಪ್ರಕ್ರಿಯೆಯ ಅವಧಿಯನ್ನು ಕಡಿಮೆಗೊಳಿಸಿದರೆ, ನಿಗದಿತ ವೇಳಾಪಟ್ಟಿಯಂತೆ ಪೂರ್ಣಗೊಳ್ಳಬಹುದೇ ಎಂದು ಪೀಠವು ಕೇಳಿದೆ. ಜಿಲ್ಲಾ ನ್ಯಾಯಾಲಯ, ಸಿವಿಲ್‌ ನ್ಯಾಯಾಲಯಗಳಲ್ಲಿನ 4,180 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಉಳಿದ 1,324 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭ ಆಗಿಲ್ಲ. ಇದು ಸರಿಯಲ್ಲ, ಎಂದು ಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.