ADVERTISEMENT

ಸಂಸತ್ತಿನಲ್ಲಿ ‘ರಫೇಲ್’, ‘ಕಾವೇರಿ’ ಗದ್ದಲ

ಪಿಟಿಐ
Published 12 ಡಿಸೆಂಬರ್ 2018, 12:58 IST
Last Updated 12 ಡಿಸೆಂಬರ್ 2018, 12:58 IST
ವಿರೋಧ ಪಕ್ಷಗಳ ಸದಸ್ಯರು ರಾಜ್ಯಸಭೆಯಲ್ಲಿ ಭಿತ್ತಪತ್ರ ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ
ವಿರೋಧ ಪಕ್ಷಗಳ ಸದಸ್ಯರು ರಾಜ್ಯಸಭೆಯಲ್ಲಿ ಭಿತ್ತಪತ್ರ ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು–ಪಿಟಿಐ ಚಿತ್ರ   

ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಹಗರಣ, ರಾಮಮಂದಿರ ನಿರ್ಮಾಣ ಹಾಗೂ ಕಾವೇರಿ ವಿಚಾರವಾಗಿ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು.

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಬುಧವಾರ ರಾಜ್ಯಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿಲ್ಲ. ‘ಆಟಿಸಂ, ಸೆರೆಬ್ರಲ್ ಪಾಲ್ಸಿ, ಮಾನಸಿಕ ಅಸ್ವಸ್ಥತೆ ಹಾಗೂ ಬಹುವಿಕಲಾಂಗ ವ್ಯಕ್ತಿಗಳಿಗಾಗಿ ರಾಷ್ಟ್ರೀಯ ಅಭಿವೃದ್ಧಿ ಟ್ರಸ್ಟ್ ತಿದ್ದುಪಡಿ ಮಸೂದೆ’ಗೆ ಪ್ರತಿಭಟನೆ ನಡುವೆಯೇ ಅಂಗೀಕಾರ ದೊರೆಯಿತು.

ರಫೇಲ್ ಖರೀದಿ ಸಂಬಂಧ ಜಂಟಿ ಸಂಸದೀಯ ಸಮಿತಿ ರಚನೆಗೆ ಕಾಂಗ್ರೆಸ್ ಪಟ್ಟು ಹಿಡಿಯಿತು. ಅಯೋಧ್ಯೆಯಲ್ಲಿ ತಕ್ಷಣ ರಾಮಮಂದಿರ ನಿರ್ಮಿಸುವಂತೆ ಶಿವಸೇನಾ ಧರಣಿ ನಡೆಸಿತು. ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ನ್ಯಾಯ ದೊರಕಿಸುವಂತೆ ಎಐಎಡಿಎಂಕೆ ಆಗ್ರಹಿಸಿತು. ವಿಶಾಖಪಟ್ಟಣದಲ್ಲಿ ರೈಲ್ವೆ ವಲಯ ಕಚೇರಿ ತೆರೆಯುವಂತೆ ಟಿಡಿಪಿ ಸದಸ್ಯರು ಒತ್ತಾಯಿಸಿದರು.

ADVERTISEMENT

ಕಾವೇರಿ ವಿಚಾರವಾಗಿ ರಾಜ್ಯಸಭೆಯಲ್ಲಿ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷಗಳು ಪ್ರತಿಭಟನೆ ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.