ರಾಯಪುರ: ಛತ್ತೀಸ್‌ಗಢದ ಅಂಬಿಕಾಪುರ್ ಮೆಡಿಕಲ್ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ 4 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಹಿನ್ನೆಲೆಯಲ್ಲಿ 4 ಶಿಶುಗಳುಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
‘ಘಟನೆ ಕುರಿತಂತೆ ತನಿಖೆ ನಡೆಸಲು ತನಿಖಾ ತಂಡ ರಚನೆಗೆ ಆರೋಗ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಹೆಚ್ಚಿನ ಮಾಹಿತಿ ಪಡೆಯಲು ಅಂಬಿಕಾಪುರ ಆಸ್ಪತ್ರೆಗೆ ತೆರಳುತ್ತಿದ್ದು, ತನಿಖೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ಎಎನ್‌ಐಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.