ನವದೆಹಲಿ: ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಇಲ್ಲಿವರೆಗೆ ಕರ್ನಾಟಕದ 20.72 ಲಕ್ಷ ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ತಿಳಿಸಿದರು.
ಲೋಕಸಭೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್ ಶುಕ್ರವರ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ದೇಶದಲ್ಲಿ ಈ ತನಕ 3.36 ಕೋಟಿ ಜನರು ಯೋಜನೆಯ ಲಾಭ ಪಡೆದಿದ್ದಾರೆ. ಈ ಯೋಜನೆಗೆ ಕೇಂದ್ರದ ಪಾಲಿನ ರೂಪದಲ್ಲಿ ಕರ್ನಾಟಕಕ್ಕೆ ಈವರೆಗೆ ₹615 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.