ADVERTISEMENT

ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಪ್ರಜ್ಞಾ ಠಾಕೂರ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 5:31 IST
Last Updated 21 ನವೆಂಬರ್ 2019, 5:31 IST
   

ನವದೆಹಲಿ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

2019ರ ಸಂಸತ್ ಚುನಾವಣೆಯಲ್ಲಿ ಭೋಪಾಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್‌ ಅವರನ್ನು ಪರಾಭವಗೊಳಿಸಿದ್ದರು.ಮಾಲೆಗಾಂವ್‌ ಬಾಂಬ್‌ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಅವರು 2017 ರ ಏಪ್ರಿಲ್‌ನಲ್ಲಿ ಮುಂಬೈ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ನೇತೃತ್ವ ವಹಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.