ADVERTISEMENT

ಸಾಧ್ವಿ ಪ್ರಗ್ಯಾ ಹೇಳಿಕೆಗೆ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ಒತ್ತಾಯ 

​ಪ್ರಜಾವಾಣಿ ವಾರ್ತೆ
Published 9 ಮೇ 2019, 17:20 IST
Last Updated 9 ಮೇ 2019, 17:20 IST
   

ನವದೆಹಲಿ: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಹುತಾತ್ಮ ಹೇಮಂತ್ ಕರ್ಕರೆ ಬಗ್ಗೆ ಹೇಳಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಭಯೋತ್ಪಾದಕರ ವಿರುದ್ಧ ಹೋರಾಡಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲ ಯೋಧರನ್ನು ಸಾಧ್ವಿ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ವಕ್ತಾರ ರಣದೀಪ್ ಸಿಂಗ್ಸುರ್ಜೇವಾಲ ಹೇಳಿದ್ದಾರೆ.

ಮೋದಿಯವರೇ, 26/11ರ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಅವರನ್ನು ದೇಶದ್ರೋಹಿ ಎನ್ನುವ ಅಪರಾಧವನ್ನು ಬಿಜೆಪಿ ನಾಯಕರು ಮಾತ್ರವೇ ಮಾಡಬಲ್ಲರು ಎಂದು ಸುರ್ಜೇವಾಲ ಟ್ವೀಟಿಸಿದ್ದಾರೆ.

ಭಯೋತ್ಪಾದನೆ ವಿರುದ್ದ ಹೋರಾಡಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲ ಭಾರತೀಯ ಯೋಧರಿಗೆ ಮಾಡಿದ ಅವಮಾನ ಇದು. ನೀವು ದೇಶದ ಜನರ ಕ್ಷಮೆ ಕೋರಿ ಪ್ರಗ್ಯಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸುರ್ಜೇವಾಲ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.