ADVERTISEMENT

ತೆಲಂಗಾಣ ಸಂಪುಟ ವಿಸ್ತರಣೆ: ಪುತ್ರರನ್ನು ಕೈಬಿಟ್ಟ ಕೆಸಿಆರ್‌

ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 20:11 IST
Last Updated 19 ಫೆಬ್ರುವರಿ 2019, 20:11 IST
ಕೆ. ಚಂದ್ರಶೇಖರ್‌ ರಾವ್‌
ಕೆ. ಚಂದ್ರಶೇಖರ್‌ ರಾವ್‌   

ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮಂಗಳವಾರ ಸಚಿವ ಸಂಪುಟ ವಿಸ್ತರಿಸಿದ್ದು, ತಮ್ಮ ಪುತ್ರ ಕೆ.ಟಿ. ರಾಮಾರಾವ್‌ ಮತ್ತು ಸಹೋದರನ ಪುತ್ರ ಟಿ. ಹರೀಶ್ ರಾವ್‌ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದಾರೆ.

ಹೊಸದಾಗಿ ಹತ್ತು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು, ಆ ಪೈಕಿ ಆರು ಹೊಸ ಮುಖಗಳಿಗೆ ಅವಕಾಶ ನೀಡಿದ್ದಾರೆ. ಇದರಿಂದ ಸಂಪುಟ ಸದಸ್ಯರ ಸಂಖ್ಯೆ 12ಕ್ಕೆ ಏರಿದಂತಾಗಿದೆ.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಇ.ಎಸ್‌.ಎಲ್‌ ನರಸಿಂಹನ್‌ ಪ್ರಮಾಣ ವಚನ ಬೋಧಿಸಿದರು.

ADVERTISEMENT

ಲೋಕಸಭಾ ಚುನಾವಣಾ ಕಣಕ್ಕಿಳಿಸುವ ಉದ್ದೇಶದಿಂದ ಪುತ್ರ ಮತ್ತು ಸಹೋದರನ ಪುತ್ರ ನನ್ನು ಸಂಫುಟದಿಂದ ಕೈಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.