ADVERTISEMENT

ಈ ದಿನದ ಪ್ರಮುಖ 10 ಸುದ್ದಿಗಳು

ಪ್ರಜಾವಾಣಿ ವಿಶೇಷ
Published 8 ಮೇ 2023, 11:53 IST
Last Updated 8 ಮೇ 2023, 11:53 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಈ ದಿನದ ಪ್ರಮುಖ 10 ಸುದ್ದಿಗಳು... ರಾಜ್ಯ, ರಾಷ್ಟ್ರೀಯ, ವಿದೇಶದ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ವಿವರಣೆ

2022-23ನೇ ಸಾಲಿನ‌ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ 83.89 ವಿದ್ಯಾರ್ಥಿಗಳು ಪಾಸ್‌

ಸಾಂದರ್ಭಿಕ ಚಿತ್ರ : ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿನಿಯರು

2022-23ನೇ ಸಾಲಿನ‌ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 83.89ರಷ್ಟು ವಿದ್ಯಾರ್ಥಿನಿಯರು, ಶೇ 80.08ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಲಿಂಗಾಯತರನ್ನು ಎತ್ತಿ ಕಟ್ಟುವ ಹುನ್ನಾರ: ಬಿಎಸ್‌ವೈ ಗರಂ

ಬಿ.ಎಸ್. ಯಡಿಯೂರಪ್ಪ

ಈ ಹಿಂದೆ ವೀರಶೈವ– ಲಿಂಗಾಯತ ಸಮಾಜವನ್ನು ಒಡೆಯಲು ಹೋಗಿದ್ದ ಕಾಂಗ್ರೆಸ್‌ ಪಕ್ಷ ಈಗ ಈ ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ADVERTISEMENT

ರಾಜಸ್ಥಾನದಲ್ಲಿ ಮಿಗ್–21 ಯುದ್ಧ ವಿಮಾನ ಪತನಗೊಂಡು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಬಹಲೋಲ್‌ ನಗರ ಹೊರ ವಲಯದ ಮನೆಯ ಮೇಲೆ ಸೋಮವಾರ ಭಾರತೀಯ ವಾಯುಪಡೆಯ ಮಿಗ್‌ –21 ಯುದ್ಧ ವಿಮಾನ ಪತನವಾಗಿದ್ದು, ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದರು– ಪಿಟಿಐ ಚಿತ್ರ

ಭಾರತೀಯ ವಾಯುಪಡೆಯ ಮಿಗ್–21 ಯುದ್ಧ ವಿಮಾನವು ರಾಜಸ್ಥಾನದ ಹನುಮಗಢ ಜಿಲ್ಲೆಯಲ್ಲಿ ಪತನಗೊಂಡಿದ್ದು, ಸ್ಥಳದಲ್ಲಿದ್ದ ಇಬ್ಬರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸೋಡಿಯಾ ನ್ಯಾಯಾಂಗ ಬಂಧನದ ಅವಧಿ ಮೇ 23ರ ವರೆಗೆ ವಿಸ್ತರಣೆ

ದೆಹಲಿಯ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ

2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಮೇ 23 ರವರೆಗೆ ವಿಸ್ತರಿಸಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ ಪ್ರಕರಣ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ವಿಮಾನದ ಪ್ರಾತಿನಿಧಿಕ ಚಿತ್ರ

ಕಳೆದ (2022ರ) ನವೆಂಬರ್‌ನಲ್ಲಿ ಏರ್‌ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬ ತಮ್ಮ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ 72 ವರ್ಷದ ಮಹಿಳೆ ಸಲ್ಲಿಸಿರುವ ಮೇಲ್ಮನವಿಯ ಕುರಿತು ಕೇಂದ್ರ ಸರ್ಕಾರ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ಟಿಕೆಟ್‌ ಮಾರಾಟವನ್ನು ತಕ್ಷಣವೇ ನಿಲ್ಲಿಸಲು ‘ಗೋ ಫರ್ಸ್ಟ್‌’ಗೆ ಡಿಜಿಸಿಎ ತಾಕೀತು

ಗೋ ಫರ್ಸ್ಟ್‌ ವಿಮಾನದ ಸಾಂದರ್ಭಿಕ ಚಿತ್ರ

ವಿಮಾನ ಟಿಕೆಟ್‌ಗಳನ್ನು ನೇರ ಅಥವಾ ಪರೋಕ್ಷವಾಗಿ ಬುಕಿಂಗ್‌ ಮಾಡುವುದು ಮತ್ತು ಮಾರಾಟ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ–ಡಿಜಿಸಿಎ ವಿಮಾನಯಾನ ಸಂಸ್ಥೆ ‘ಗೋ ಫರ್ಸ್ಟ್‌’ಗೆ ಸೋಮವಾರ ಆದೇಶಿಸಿದೆ. ಮುಂದಿನ ಸೂಚನೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಡಿಜಿಸಿಎ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಮೋದಿ ಧಾರ್ಮಿಕ ಘೋಷಣೆ ನನಗೆ ಅಚ್ಚರಿ ತಂದಿದೆ: ಶರದ್ ಪವಾರ್

ಎನ್‌ಸಿಪಿ ವರಿಷ್ಠ ಶರದ್ ಪವಾರ್

’ಕರ್ನಾಟಕದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ‘ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಪೆರು ದೇಶದ ಚಿನ್ನದ ಗಣಿಯಲ್ಲಿ ಅಗ್ನಿ ದುರಂತ: 27 ಕಾರ್ಮಿಕರು ಸಾವು

ಸಾಂದರ್ಭಿಕ ಚಿತ್ರ

ಪೆರುವಿನ ದಕ್ಷಿಣ ಭಾಗದಲ್ಲಿಯ ಚಿನ್ನದ ಗಣಿಯೊಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 27 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ. ದುರಂತ ಸಂಭವಿಸಿದ ಸ್ಥಳದಿಂದ ಒಟ್ಟು 175 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಗುತ್ತಿಗೆದಾರರೊಬ್ಬರ ಅಡಿ ಕೆಲಸ ಮಾಡುತ್ತಿದ್ದ 27 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಯಾನಕ್ವಿಹುವಾ ಗಣಿ ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರ್ಕಾರದ ಕಾಲಾಳಾದ ಆಯೋಗ, ಪೊಲೀಸ್ ವ್ಯವಸ್ಥೆ: ದೇವನೂರ ಮಹಾದೇವ

ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದವರ ಪ್ರತಿಭಟನೆ

‘ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುವ ರೌಡಿಶೀಟರ್‌ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದವರು ಇಲ್ಲಿನ ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್‌ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ‘ರೌಡಿ ಶೀಟರ್‌ ಹೇಳಿಕೆ ಭಯ ಹುಟ್ಟಿಸುತ್ತದೆ. ಆತ ಭಯೋತ್ಪಾದಕನಲ್ಲವಾ? ಎಂದು ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಬಿಎಂಟಿಸಿ ಬಸ್‌ನಲ್ಲಿ ರಾಹುಲ್ ಗಾಂಧಿ ಸಂಚಾರ: ಮಹಿಳೆಯರು, ವಿದ್ಯಾರ್ಥಿಗಳ ಜೊತೆ ಸಂವಾದ

ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರ ಜೊತೆ ಸಂವಾದ ನಡೆಸಿದ ರಾಹುಲ್ ಗಾಂಧಿ

ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀದ್ದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿರುಸಿನ ಪ್ರಚಾರ ನಡೆಸಿದರು.. ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಸಂಚರಿಸಿದ ರಾಹುಲ್ ಗಾಂಧಿ, ಕಾಲೇಜು ವಿದ್ಯಾರ್ಥಿಗಳು ಮತ್ತು ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯರ ಜೊತೆ ಸಂವಾದ ನಡೆಸಿದರು. ರಾಜ್ಯದ ಅಭಿವೃದ್ಧಿ ಕುರಿತಾದ ಅವರ ದೃಷ್ಟಿಕೋನದ ಬಗ್ಗೆ ರಾಹುಲ್ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.