ADVERTISEMENT

ದೀರ್ಘ ಕೋಮಾ ಸ್ಥಿತಿಯಲ್ಲಿ ಪ್ರಣವ್ ಮುಖರ್ಜಿ: ಆಸ್ಪತ್ರೆ ಪ್ರಕಟಣೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 8:18 IST
Last Updated 27 ಆಗಸ್ಟ್ 2020, 8:18 IST
ಪ್ರಣವ್ ಮುಖರ್ಜಿ
ಪ್ರಣವ್ ಮುಖರ್ಜಿ   

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿಯೇ ಇದ್ದು ಅವರಿಗೆವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ಮುಂದುವರಿದಿದೆ.

ಶ್ವಾಸಕೋಶದ ಸೋಂಕು ಮತ್ತು ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿರುವ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಹೃದಯಕ್ಕೆ ರಕ್ತ ಸಂಚಾರ ಸರಿಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.