ADVERTISEMENT

ಪ್ರಣವ್ ಮುಖರ್ಜಿ ದೀರ್ಘ ಕೋಮಾದಲ್ಲಿದ್ದಾರೆ: ಆಸ್ಪತ್ರೆ ಪ್ರಕಟಣೆ

ಏಜೆನ್ಸೀಸ್
Published 26 ಆಗಸ್ಟ್ 2020, 8:08 IST
Last Updated 26 ಆಗಸ್ಟ್ 2020, 8:08 IST
ಪ್ರಣವ್ ಮುಖರ್ಜಿ
ಪ್ರಣವ್ ಮುಖರ್ಜಿ   

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ. ವೆಂಟಿಲೇಟರ್ ನೆರವು ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮುಖರ್ಜಿ ಅವರಿಗೆ ಸದ್ಯ ಶ್ವಾಸಕೋಶದ ಸೋಂಕಿಗಾಗಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಿಂದ ಅವರ ಮೂತ್ರಪಿಂಡದ ಕ್ಷಮತೆ ಸ್ವಲ್ಪ ಕಡಿಮೆಯಾಗಿದೆ ಎಂದೂ ಆಸ್ಪತ್ರೆ ತಿಳಿಸಿದೆ.

84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಇದೇ ಆಸ್ಪತ್ರೆಯಲ್ಲಿ ಅವರಿಗೆ ತುರ್ತುಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.