ADVERTISEMENT

ಪ್ರಣವ್ ಮುಖರ್ಜಿ ನಿಧನರಾದಾಗ ಕಾಂಗ್ರೆಸ್ ತಲೆಕೆಡಿಸಿಕೊಂಡಿರಲಿಲ್ಲ: ಶರ್ಮಿಷ್ಠಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಡಿಸೆಂಬರ್ 2024, 10:58 IST
Last Updated 28 ಡಿಸೆಂಬರ್ 2024, 10:58 IST
<div class="paragraphs"><p>ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಮತ್ತು&nbsp;ಶರ್ಮಿಷ್ಠಾ ಮುಖರ್ಜಿ</p></div>

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಮತ್ತು ಶರ್ಮಿಷ್ಠಾ ಮುಖರ್ಜಿ

   

Credit: X/@Sharmistha_GK

ನವದೆಹಲಿ: ‘ಸ್ಮಾರಕ ನಿರ್ಮಾಣದ ಕುರಿತು ಭಾರತದ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ತಲೆಕೆಡಿಸಿಕೊಂಡಿರಲಿಲ್ಲ’ ಎಂದು ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಟೀಕಿಸಿದ್ದಾರೆ.

ADVERTISEMENT

ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಪ್ರತ್ಯೇಕ ಸ್ಮಾರಕ ಕೋರಿ ಪ್ರಧಾನಿ ಮೋದಿ ಅವರಿಗೆ ಕಾಂಗ್ರೆಸ್ ಪ್ರಸ್ತಾವನೆ ಸಲ್ಲಿಸಿದ ಬಗ್ಗೆ ಶರ್ಮಿಷ್ಠಾ ಮುಖರ್ಜಿ ವಾಗ್ದಾಳಿ ನಡೆಸಿದ್ದಾರೆ.

‘ಬಾಬಾ (ಪ್ರಣವ್‌ ಮುಖರ್ಜಿ) ನಿಧನರಾದಾಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ವತಿಯಿಂದ ಸಂತಾಪ ಸೂಚಕ ಸಭೆಯನ್ನು ಕರೆಯಲು ಸಹ ಚಿಂತನೆ ಮಾಡಿರಲಿಲ್ಲ. ರಾಷ್ಟ್ರಪತಿಯವರ ನಿಧನಕ್ಕೆ ಸಂತಾಪ ಸಭೆ ನಡೆಸುವುದಿಲ್ಲ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದರು. ಬಾಬಾ ಅವರ ಅವಧಿಯಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್‌ ಅವರ ನಿಧನದ ನಂತರ ಸಿಡಬ್ಲ್ಯೂಸಿ ಸಭೆ ಕರೆದು ಸಂತಾಪ ಸೂಚಿಸಲಾಗಿತ್ತು. ಈ ಎಲ್ಲಾ ಅಂಶಗಳನ್ನು ತಂದೆಯವರು ಬರೆದ ಡೈರಿಗಳಿಂದ ತಿಳಿದುಕೊಂಡಿದ್ದೇನೆ’ ಎಂದು ಶರ್ಮಿಷ್ಠಾ ಮುಖರ್ಜಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಇಂದು (ಶನಿವಾರ) ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ಪ್ರಧಾನಿ ಮೋದಿಗೆ ಪತ್ರದ ಮೂಲಕ ತಿಳಿಸಿದ್ದರು.

‘ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನಡೆಸದೇ ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್‌ ಸಿಂಗ್ ಅವರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ’ ಎಂದೂ ಕಾಂಗ್ರೆಸ್ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.