ADVERTISEMENT

ಪ್ರಶಾಂತ್‌ ಭೂಷಣ್‌ ‘ಸುಪ್ರೀಂ’ ಮೊರೆ

ಪಿಟಿಐ
Published 12 ಸೆಪ್ಟೆಂಬರ್ 2020, 16:43 IST
Last Updated 12 ಸೆಪ್ಟೆಂಬರ್ 2020, 16:43 IST
ಪ್ರಶಾಂತ್‌ ಭೂಷಣ್‌
ಪ್ರಶಾಂತ್‌ ಭೂಷಣ್‌   

ನವದೆಹಲಿ: ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್‌ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಹಿರಿಯ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಅವರು ಶನಿವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್‌, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಭೂಷಣ್‌ ‌ಪರ ವಕೀಲೆ ಕಾಮಿನಿ ಜೈಸ್ವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT