ADVERTISEMENT

ನಿತೀಶ್ ಕುಮಾರ್ ಮಾನಸಿಕ ಆರೋಗ್ಯದ ಬುಲೆಟಿನ್ ಬಿಡುಗಡೆ ಮಾಡಿ: ಪ್ರಶಾಂತ್ ಕಿಶೋರ್

ಪಿಟಿಐ
Published 25 ಮಾರ್ಚ್ 2025, 12:48 IST
Last Updated 25 ಮಾರ್ಚ್ 2025, 12:48 IST
<div class="paragraphs"><p>ಪ್ರಶಾಂತ್ ಕಿಶೋರ್ ಮತ್ತು ನಿತೀಶ್ ಕುಮಾರ್</p></div>

ಪ್ರಶಾಂತ್ ಕಿಶೋರ್ ಮತ್ತು ನಿತೀಶ್ ಕುಮಾರ್

   

ಶೇಖ್‌ಪುರ: ‘ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಾನಸಿಕ ಆರೋಗ್ಯದ ಬುಲೆಟಿನ್‌ ಅನ್ನು ಸರ್ಕಾರ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಜನ ಸುರಾಜ್ ಪಕ್ಷದ ಮುಖಂಡ ಪ್ರಶಾಂತ್ ಕಿಶೋರ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ‘ಸಾರ್ವಜನಿಕರ ಗಮನಕ್ಕೆ ಬಾರದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸಭೆ ಹಾಗೂ ಸಮಾರಂಭ, ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳದಂತೆ ನಿತೀಶ್ ಅವರನ್ನು ತಡೆಯಲಾಗುತ್ತಿದೆ. ಜತೆಗೆ ಅವರ ವಿಚಿತ್ರ ವರ್ತನೆಯಿಂದ ಇತ್ತೀಚೆಗೆ ಸದಾ ಸುದ್ದಿಯಲ್ಲಿದ್ದಾರೆ’ ಎಂದಿದ್ದಾರೆ.

ADVERTISEMENT

‘ನಿತೀಶ್ ಅವರ ಮಾನಸಿಕ ಆರೋಗ್ಯದ ಕುರಿತು ಅವರ ಸಹವರ್ತಿಯಾದ ಸುಶೀಲ್ ಮೋದಿ ಅವರು 2023ರಲ್ಲೇ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಬಿಹಾರದ ಜನರು ಅವರ ವರ್ತನೆಯನ್ನು ಗಮನಿಸುತ್ತಾ ಬಂದಿದ್ದಾರೆ. ತಮ್ಮ ಸಂಪುಟದ ಸದಸ್ಯರ ಹೆಸರುಗಳನ್ನೇ ಅವರು ಮರೆಯುತ್ತಿದ್ದಾರೆ. ಕೆಲವೊಂದು ಸಂಗತಿಗಳನ್ನು ನೆನಪಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಪ್ರವಾಸದ ಸಂದರ್ಭದಲ್ಲಿ ಯಾವ ಜಿಲ್ಲೆಯಲ್ಲಿದ್ದೇನೆ ಎಂಬುದೂ ಅವರಿಗೆ ಗೊತ್ತಿರುವುದಿಲ್ಲ. ಬಿಪಿಎಸ್‌ಸಿ ಪರೀಕ್ಷೆ ಕುರಿತು ಇತ್ತೀಚೆಗೆ ಅವರಿಗೆ ಪ್ರಶ್ನೆ ಕೇಳಲಾಗಿತ್ತು. ಆ ವಿಚಾರವೇ ಅವರಿಗೆ ತಿಳಿದಿರಲಿಲ್ಲ’ ಎಂದು ಪ್ರಶಾಂತ್ ಕಿಶೋರ್ ಕಳವಳ ವ್ಯಕ್ತಪಡಿಸಿದ್ದಾರೆ.

‘ಈ ಎಲ್ಲಾ ಅಂಶಗಳಿಂದ ರಾಜ್ಯ ಸರ್ಕಾರವು ಮುಖ್ಯಮಂತ್ರಿ ನಿತೀಶ್ ಅವರ ಮಾನಸಿಕ ಆರೋಗ್ಯದ ಬುಲೆಟಿನ್ ಅನ್ನು ಕೂಡಲೇ ಬಿಡುಗಡೆ ಮಾಡಿ, ಸಾರ್ವಜನಿಕರಲ್ಲಿ ಇರುವ ಗೊಂದಲವನ್ನು ದೂರ ಮಾಡಬೇಕು. ಆದರೆ, ಅವರು ಅದನ್ನು ಮಾಡುತ್ತಾರೆ ಎಂಬ ನಂಬಿಕೆ ನನಗಿಲ್ಲ’ ಎಂದಿದ್ದಾರೆ.

ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರು ಹಿಂದೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಲ್ಲಿದ್ದರು. ನಂತರ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಪಕ್ಷದಿಂದ ಹೊರಬಂದು, ಹೊಸ ಪಕ್ಷ ಕಟ್ಟಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.