ADVERTISEMENT

ಕೋವಿಡ್‌–19 | ಮುಂಬೈ ಮಹಾನಗರ ಪಾಲಿಕೆ ಆಯುಕ್ತರನ್ನು ವರ್ಗಾಯಿಸಿದ ಮಹಾ ಸರ್ಕಾರ

ಏಜೆನ್ಸೀಸ್
Published 8 ಮೇ 2020, 16:23 IST
Last Updated 8 ಮೇ 2020, 16:23 IST
ಉದ್ಧವ್‌ ಠಾಕ್ರೆ
ಉದ್ಧವ್‌ ಠಾಕ್ರೆ   

ಮಹಾರಾಷ್ಟ್ರ: ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯ ಆಯುಕ್ತ ಪ್ರವೀಣ್‌ ಪರದೇಶಿ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆದೇಶ ಹೊರಡಿಸಿದ್ದಾರೆ.

ಮುಂಬೈ ನಗರ ಕೊರೊನಾ ವೈರಸ್‌ ಸೋಂಕಿನಿಂದತತ್ತರಿಸಿದ್ದು, ಈವರೆಗೂ437 ಮಂದಿ ಸಾವಿಗೀಡಾಗಿದ್ದಾರೆ. ಜೊತೆಗೆ, ಕೋವಿಡ್‌-19‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, 11,394 ಮಂದಿಗೆಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೊನಾ ವೈರಸ್‌ ಅನ್ನು ನಿಯಂತ್ರಣ ತರುವಲ್ಲಿ ಪ್ರವೀಣ್‌ ವಿಫಲರಾಗಿದ್ದೇ ವರ್ಗಾವಣೆಗೆ ಮುಖ್ಯ ಕಾರಣ ಎಂದು ತಿಳಿದು ಬಂದಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನಗರಾಭಿವೃದ್ಧಿ) ಇಕ್ಬಾಲ್‌ ಸಿಂಗ್‌ ಚಾಹಲ್‌ ಅವರನ್ನು ಪ್ರವೀಣ್‌ ಅವರ ಸ್ಥಾನಕ್ಕೆ ನೇಮಿಸಲಾಗಿದೆ. ಇತ್ತ ಪ್ರವೀಣ್‌ ಪರದೇಶಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ADVERTISEMENT

ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಅಬ್ಬಾ ಸಾಹೇಬ್‌ ಜಾರ್ಹಾದ್‌ ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದೆ. ಕಡ್ಡಾಯ ರಜೆಯಲ್ಲಿದ್ದ ಮಾಜಿ ಥಾಣೆ ಪುರಸಭೆ ಆಯುಕ್ತ ಸಂಜೀವ್‌ ಜೈಸ್ವಾಲ್‌ ಅವರನ್ನು ಜಾರ್ಹಾದ್‌ ಸ್ಥಾನಕ್ಕೆ ನೇಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕಿಶೋರೆರಾಜೆ ನಿಂಬಾಲ್ಕರ್‌ ಅವರಿಂದ ಜರ್ಹಾದ್ ಪರಿಹಾರ ಮತ್ತು ಪುನರ್ವಸತಿ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.