ಸಾವು
ಪ್ರಾತಿನಿಧಿಕ ಚಿತ್ರ
ಪ್ರಯಾಗರಾಜ್: ಮಲದ ಗುಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲ ಸೇವನೆಯಿಂದ ಉಸಿರುಗಟ್ಟಿ ಬಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ನಡೆದಿದೆ.
ಮೃತರನ್ನು ಧರ್ಮರಾಜ್ (48) ಮತ್ತು ವಿನಯ್ ಕುಮಾರ್ (16) ಎಂದು ಗುರುತಿಸಲಾಗಿದೆ.
ಪ್ರಯಾಗ್‌ರಾಜ್ ಜಿಲ್ಲೆಯ ಸೈದಾಬಾದ್‌ನ ಗಂಗಾ ನಗರದಲ್ಲಿ ಇಬ್ಬರೂ ಮಲದ ಗುಂಡಿ ಸ್ವಚ್ಛಗೊಳಿಸಲು ಕೆಳಕ್ಕೆ ಇಳಿದಿದ್ದರು. ಈ ವೇಳೆ ವಿಷಕಾರಿ ಅನಿಲ ಸೇವಿಸಿದ್ದು, ಉಸಿರು ಕಟ್ಟಿದೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಸ್ಥಳೀಯ ಎಸಿಪಿ ಸುನೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.