ADVERTISEMENT

VIDEO: ಮಹಾಕುಂಭಮೇಳಕ್ಕೆ 4.75 ಲಕ್ಷ ಚದರ ಅಡಿಯಲ್ಲಿ ಬೃಹತ್ ಪೆಂಡಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2025, 11:24 IST
Last Updated 10 ಜನವರಿ 2025, 11:24 IST
   

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದೆ. 4.75 ಲಕ್ಷ ಚದರ ಅಡಿ ಜಾಗದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, ಕುಂಭಮೇಳಕ್ಕೆ ಬರುವವರಿಗೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ.

22 ಎಕರೆ ಪ್ರದೇಶವನ್ನು ಕುಂಭಮೇಳದ ಸಿದ್ಧತೆಗೆ ಬಳಸಿಕೊಳ್ಳಲಾಗಿದ್ದು, 4.75 ಲಕ್ಷ ಚದರಡಿ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ನೆಲಮಹಡಿಯ ನೀರಿನ ಸರಬರಾಜು, ಒಳಚರಂಡಿ ವ್ಯವಸ್ಥೆ ಮಾಡಲಾಗಿದ್ದು, 40–45 ದಿನ ಕ್ಯಾಂಪ್‌ನ ನೈರ್ಮಲ್ಯ ಕಾಪಾಡಿಕೊಳ್ಳಲಾಗುತ್ತದೆ ಎಂದು ವಾಸ್ತುಶಿಲ್ಪಿ ಮಾಲಿನಿ ದೋಶಿ ಹೇಳಿದ್ದಾರೆ.

ಗುಜರಾತ್ ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದು ಇದನ್ನು ನಿರ್ಮಾಣ ಮಾಡಲಾಗಿದೆ. ಮುಖ್ಯ ಪ್ರದೇಶಗಳಲ್ಲಿ 24 ಗಂಟೆ ಆಸ್ಪತ್ರೆ ಸೌಲಭ್ಯ, ಉಚಿತ ಭಂಡಾರ, ವಿಐಪಿ ಅತಿಥಿಗಳಿಗೆ ದತ್ತ ಸದನ ನಿರ್ಮಾಣ ಮಾಡಲಾಗಿದೆ ಎಂದಿದ್ದಾರೆ.

ADVERTISEMENT

ಇದೇ 13ರಂದು ಆರಂಭವಾಗಲಿರುವ ಕುಂಭಮೇಳವು ಫೆಬ್ರುವರಿ 26ರವರೆಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.