ನವದೆಹಲಿ: ‘ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರನ್ನು ಕೋವಿಡ್–19 ಲಸಿಕೆ ಪ್ರಯೋಗಕ್ಕೆ ಒಳಪಡಿಸದ ಕಾರಣ ಸದ್ಯ ಅವರಿಗೆ ಲಸಿಕೆ ನೀಡಬಾರದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.
ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಸಚಿವಾಲಯ, ತುರ್ತು ಸಂದರ್ಭಗಳಲ್ಲಿ 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ, ಕೋವಿಡ್–19 ಹಾಗೂ ಇತರ ಲಸಿಕೆಗಳನ್ನು ನಡುವೆ 14 ದಿನ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.
ಎರಡು ಪ್ರತ್ಯೇಕ ಕೋವಿಡ್–19 ಲಸಿಕೆಗಳನ್ನು ನೀಡಬಾರದು ಎಂದು ಸೂಚಿಸಿರುವ ಸಚಿವಾಲಯವು, ಎರಡನೇ ಡೋಸ್ ನೀಡುವ ಸಂದರ್ಭದಲ್ಲೂ ಮೊದಲು ಯಾವ ಕಂಪನಿ ಲಸಿಕೆ ನೀಡಲಾಗಿತ್ತೋ, ಅದನ್ನೇ ನೀಡಬೇಕು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.