ADVERTISEMENT

ಸಾಮೂಹಿಕ ಅತ್ಯಾಚಾರ, ಗರ್ಭಿಣಿಗೆ ಬೆಂಕಿ ಹಚ್ಚಿದ ದುರುಳರು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 13:03 IST
Last Updated 17 ಫೆಬ್ರುವರಿ 2024, 13:03 IST
   

ಮುರೆನಾ (ಮಧ್ಯಪ್ರದೇಶ, ಪಿಟಿಐ): ಮಧ್ಯಪ್ರದೇಶದ ಮುರೆನಾ ಜಿಲ್ಲೆಯಲ್ಲಿ 34 ವರ್ಷದ ಗರ್ಭಿಣಿಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಮೂವರು ದುರುಳರು, ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶೇ 80ರಷ್ಟು ಸುಟ್ಟ ಗಾಯಗಳಿಗೆ ಒಳಗಾದ ಸಂತ್ರಸ್ತೆಯು ಗ್ವಾಲಿಯರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ಹೋರಾಟ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ತನ್ನ ಪತಿಯು ಅತ್ಯಾಚಾರ ಎಸಗಿದ್ದ ಮಹಿಳೆ ಜೊತೆ ರಾಜಿ ಮಾಡಿಕೊಳ್ಳಲಿಕ್ಕಾಗಿ, ಸಂತ್ರಸ್ತೆಯು ಆಕೆಯ ಗ್ರಾಮಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ’ ಎಂದು ಅಂಬಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಲೋಕ್ ಪರಿಹಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ADVERTISEMENT

‘ಮಹಿಳೆಯ ಮನೆಯಲ್ಲಿದ್ದ ಮೂವರು ಪುರುಷರು ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಸಂತ್ರಸ್ತೆಗೆ ಇಂಧನ ಸುರಿದು ಬೆಂಕಿ ಹಚ್ಚಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತೆಯ ಪತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಮ್ಯಾಜಿಸ್ಟ್ರೇಟ್‌ ಬಳಿ ಸಂತ್ರಸ್ತೆಯು ಹೇಳಿಕೆಯನ್ನು ದಾಖಲಿಸಿದ್ದಾರೆ. ಆದರೆ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಂಡಿಲ್ಲ. ತನಿಖೆ ನಡೆದಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.