ನವದೆಹಲಿ : ‘ಗರ್ಭಿಣಿಯರಿಗೆ ಕಚೇರಿಗೆ ಬರುವುದಕ್ಕೆ ವಿನಾಯಿತಿ ನೀಡಲಾಗುವುದು’ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಹಾಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜಾರಿಗೊಳಿಸುವ ನಿರೀಕ್ಷೆ ಇದೆ ಎಂದಿದ್ದಾರೆ.
ಹೆರಿಗೆ ರಜೆಯನ್ನು ತೆಗೆದುಕೊಳ್ಳದೇ ಇರುವವರಿಗೂ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗುವುದು. ಅಂತೆಯೇ ಅಂಗವಿಕಲರಿಗೂ ವಿನಾಯಿತಿ ಸಿಗಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.