ADVERTISEMENT

ಪ್ರಮಾಣವಚನಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಗಾಂಧಿ ಸಮಾಧಿಗೆ ನಮಿಸಿದ ದ್ರೌಪದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜುಲೈ 2022, 3:57 IST
Last Updated 25 ಜುಲೈ 2022, 3:57 IST
   

ನವದೆಹಲಿ:ದೇಶದ 15ನೇ ರಾಷ್ಟ್ರಪತಿಯಾಗಿ ಇಂದು (ಜುಲೈ 25) ಪ್ರಮಾಣವಚನ ಸ್ವೀಕರಿಸಲಿರುವ ದ್ರೌಪದಿ ಮುರ್ಮು ಅವರುರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು,ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರೊಂದಿಗೆ ವಿಧಿಯುಕ್ತ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ.

ಮುರ್ಮು ಅವರಿಗೆ, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ನಂತರ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹಾಗೂ ಇತರರು ಸಭೆಯಲ್ಲಿಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.