ADVERTISEMENT

ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಅಧಿಕೃತ ಪ್ರಕಟಣೆಯಷ್ಟೇ ಬಾಕಿ

ಪಿಟಿಐ
Published 21 ಜುಲೈ 2022, 15:44 IST
Last Updated 21 ಜುಲೈ 2022, 15:44 IST
 ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಗುರುವಾರ ಮೂರನೇ ಸುತ್ತಿನ ಮತ ಎಣಿಕೆಯ ನಂತರ ಶೇಕಡ 50ಕ್ಕೂ ಅಧಿಕ ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ಅವರ ವಿರುದ್ಧ ಚುನಾವಣೆಯಲ್ಲಿ ಬಹುತೇಕ ಜಯ ಗಳಿಸಿದ್ದಾರೆ.

ಎಲ್ಲ ಮತಗಳ ಎಣಿಕೆ ನಂತರ ಅವರ ಗೆಲುವಿನ ಬಗ್ಗೆ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಆದರೆ, ಅವರು ಈಗಾಗಲೇ 5,77,777 ಮತಗಳನ್ನು ಪಡೆದಿದ್ದಾರೆ. ಇದು ಜುಲೈ 18 ರಂದು ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮಾನ್ಯವಾದ ಮತಗಳ ಅರ್ಧದಷ್ಟು ಹೆಚ್ಚು.

ಮುರ್ಮು ಅವರು ಈಗಾಗಲೇ ಒಟ್ಟು ಮಾನ್ಯ ಮತಗಳ ಶೇಕಡಾ 53 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಪಿ ಸಿ ಮೋದಿ ಘೋಷಿಸಿದರು. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತಪತ್ರಗಳ ಎಣಿಕೆ ಇನ್ನೂ ಮಾಡಲಾಗುತ್ತಿದೆ.

ADVERTISEMENT

ಇಲ್ಲಿಯವರೆಗಿನ ಪ್ರತಿ ಸುತ್ತಿನ ಮತ ಎಣಿಕೆಯಲ್ಲಿ ಅವರು ಮೂರನೇ ಎರಡರಷ್ಟು ಮತಗಳನ್ನು ಪಡೆದಿದ್ದಾರೆ.

ಅವರ ಪರವಾಗಿ ವಿರೋಧ ಪಕ್ಷಗಳ 17 ಸಂಸದರು ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.