ADVERTISEMENT

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಸಿನ್ಹಾಗೆ ಝಡ್ ಶ್ರೇಣಿ ಭದ್ರತೆ

ಪಿಟಿಐ
Published 24 ಜೂನ್ 2022, 7:17 IST
Last Updated 24 ಜೂನ್ 2022, 7:17 IST
ಯಶವಂತ ಸಿನ್ಹಾ – ಪಿಟಿಐ ಚಿತ್ರ
ಯಶವಂತ ಸಿನ್ಹಾ – ಪಿಟಿಐ ಚಿತ್ರ   

ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವ ಅಭ್ಯರ್ಥಿ ಯಶವಂತ ಸಿನ್ಹಾಗೆ ಕೇಂದ್ರ ಸರ್ಕಾರ ‘ಝಡ್’ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸಿನ್ಹಾ ಅವರಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಕೇಂದ್ರ ಗೃಹ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಎಂಟರಿಂದ ಹತ್ತು ಮಂದಿ ಸಶಸ್ತ್ರ ಸಿಬ್ಬಂದಿ ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಸಿನ್ಹಾಗೆ ಭದ್ರತೆ ಒದಗಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಸಿನ್ಹಾ ಅವರು ಜೂನ್ 27ರಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಈಗಾಗಲೇ ‘ಝಡ್ ಪ್ಲಸ್’ ಶ್ರೇಣಿಯ ಭದ್ರತೆ ಒದಗಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.