
ಪ್ರಜಾವಾಣಿ ವಾರ್ತೆ
ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆಯನ್ನು ಶನಿವಾರ ನಿಸರ್ಜಿಸಿದ್ದಾರೆ.
ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.
16ನೇ ಲೋಕಸಭೆಯನ್ನು ವಿಸರ್ಜಿಸಿದ್ದಾಗಿ ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆ 16ನೇ ಲೋಕಸಭೆ ವಿಸರ್ಜನೆಗೆ ನಿರ್ಣಯ ಅಂಗೀಕರಿಸಿತ್ತು.
ಸಂಪೂರ್ಣ ಬಹುಮತ ಪಡೆದ ಎನ್‌ಡಿಎನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತೆ ಹೊಸ ಸರ್ಕಾರ ರಚಿಸಲಿದ್ದು, ಈ ಸಂಬಂಧ ಪಕ್ಷದಲ್ಲಿ ಚುರುಕಿನ ಚಟುವಟಿಕೆ ನಡೆಯುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.