ADVERTISEMENT

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿರುವ ರಾಷ್ಟ್ರಪತಿ ಮುರ್ಮು

ಪಿಟಿಐ
Published 25 ಸೆಪ್ಟೆಂಬರ್ 2022, 11:04 IST
Last Updated 25 ಸೆಪ್ಟೆಂಬರ್ 2022, 11:04 IST
ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ನವದೆಹಲಿ: ‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ ಬುಧವಾರದವರೆಗೆ (ಸೆಪ್ಟೆಂಬರ್‌ 26ರಿಂದ 28) ರಾಜ್ಯಕ್ಕೆ ಭೇಟಿ ನೀಡಲಿದ್ದು, ವಿವಿಧ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.

ಈ ಬಗ್ಗೆ ಭಾನುವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿರುವರಾಷ್ಟ್ರಪತಿ ಭವನ, ‘ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಮುರ್ಮು ಅವರು ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ’ ಎಂದು ಹೇಳಿದೆ.

‘ಸೋಮವಾರದಂದು ಮುರ್ಮು ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯೋಜಿಸಿರುವ ‘ಪೌರ ಸನ್ಮಾನ’ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಗಳ ಬಳಿಕ ಧಾರವಾಡದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಹೊಸ ಕ್ಯಾಂಪಸ್‌ ಅನ್ನು ಉದ್ಘಾಟಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

‘ಮಂಗಳವಾರದಂದು ಬೆಂಗಳೂರಿನಲ್ಲಿರುವಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಇಂಟಿಗ್ರೇಟೆಡ್‌ ಕ್ರಯೋಜೆನಿಕ್‌ ಎಂಜಿನ್ಸ್‌ ಮ್ಯಾನುಫ್ಯಾಕ್ಚರಿಂಗ್‌ ಫೆಸಿಲಿಟಿಯನ್ನು ಉದ್ಘಾಟಿಸಲಿದ್ದಾರೆ. ನಂತರವಿಡಿಯೊ ಕಾನ್ಫರೆನ್ಸ್‌ ಮೂಲಕ ವೈರಾಲಜಿಯ ವಲಯ ಸಂಸ್ಥೆಯ (ದಕ್ಷಿಣ ವಲಯ) ಶಿಲಾನ್ಯಾಸ ನೆರವೇರಿಸಲಿದ್ದಾರೆ’ ಎಂದು ಮಾಹಿತಿ ನೀಡಿದೆ.

‘ಬಳಿಕ ಸೇಂಟ್‌ ಜೋಸೆಫ್‌ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು. ಕರ್ನಾಟಕ ಸರ್ಕಾರವು ತಮ್ಮ ಗೌರವಾರ್ಥವಾಗಿ ನಡೆಸಲಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲೂ ಮುರ್ಮು ಅವರು ಪಾಲ್ಗೊಳ್ಳುವರು. ಬುಧವಾರದಂದು (ಸೆಪ್ಟೆಂಬರ್‌ 28) ನವದೆಹಲಿಗೆ ವಾಪಸ್ಸಾಗುವರು’ ಎಂದು ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.