ADVERTISEMENT

ನಿರ್ಭಯಾ: ವಿನಯ್‌ ಕುಮಾರ್‌ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 5:19 IST
Last Updated 1 ಫೆಬ್ರುವರಿ 2020, 5:19 IST
   

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ವಿನಯ್‌ ಕುಮಾರ್‌ ಶರ್ಮಾಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳು ಶನಿವಾರ ತಿರಸ್ಕರಿಸಿದ್ದಾರೆ.

ವಿನಯಕುಮಾರ್‌ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದ. ಈ ಮನವಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ನಾಲ್ವರು ಅಪರಾಧಿಗಳಿಗೆ ವಿಧಿಸಿರುವ ಗಲ್ಲು ಶಿಕ್ಷೆ ಜಾರಿಗೊಳಿಸುವುದನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮುಂದೂಡಿತ್ತು. ಈ ನಡುವೆ ವಿನಯ್‌ ಕುಮಾರ್‌ ಮನವಿಯನ್ನು ರಾಷ್ಟ್ರಪತಿಗಳು ಪುರಸ್ಕಾರ ಮಾಡಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.