ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಂಕಿತ ಹಾಕಿದ್ದು, ಈ ಮೂಲಕ ಮಸೂದೆಯು ಕಾಯ್ದೆ ರೂಪ ಪಡೆದುಕೊಂಡಿತು.
ಗೆಜೆಟ್‌ನಲ್ಲಿ ಗುರುವಾರ ಈ ಕುರಿತು ಅಧಿಸೂಚನೆ ಪ್ರಕಟಣೆಯಾದ ನಂತರಮ, ನೂತನ ಕಾಯ್ದೆ ಜಾರಿಗೆ ಬರಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಮಸೂದೆಯು ರಾಜ್ಯಸಭೆಯಲ್ಲಿ ಬುಧವಾರ ಮತ್ತು ಲೋಕಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.