ನವದೆಹಲಿ: ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿದೆ.
ಈ ಕುರಿತು ಶನಿವಾರ ಮಾಹಿತಿ ನೀಡಿರುವ ಸೇನಾ ಆಸ್ಪತ್ರೆಯ ವೈದ್ಯರು, 'ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ' ಎಂದು ತಿಳಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್‌ಗೆ ದಾಖಲಿಸುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.