ADVERTISEMENT

ಶಸ್ತ್ರಚಿಕಿತ್ಸೆ ಬಳಿಕ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ ಕೋವಿಂದ್

ಪಿಟಿಐ
Published 12 ಏಪ್ರಿಲ್ 2021, 13:56 IST
Last Updated 12 ಏಪ್ರಿಲ್ 2021, 13:56 IST
ರಾಷ್ಟ್ರಪತಿ ಭವನಕ್ಕೆ ಹಿಂತಿರುಗುವ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನವದೆಹಲಿಯ ಏಮ್ಸ್ ವೈದ್ಯರಿಗೆ ಧನ್ಯವಾದ ಸಲ್ಲಿಸಿದರು ಪಿಟಿಐ ಚಿತ್ರ
ರಾಷ್ಟ್ರಪತಿ ಭವನಕ್ಕೆ ಹಿಂತಿರುಗುವ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನವದೆಹಲಿಯ ಏಮ್ಸ್ ವೈದ್ಯರಿಗೆ ಧನ್ಯವಾದ ಸಲ್ಲಿಸಿದರು ಪಿಟಿಐ ಚಿತ್ರ   

ನವದೆಹಲಿ: ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್‌) ಮಾರ್ಚ್‌ 30ರಂದು ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ ರಾಷ್ಟ್ರಪತಿ ಭವನಕ್ಕೆ ಹಿಂತಿರುಗಿದರು.

‘ನನ್ನ ಶಸ್ತ್ರಚಿಕಿತ್ಸೆಯ ನಂತರ ನಾನು ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನಿಮ್ಮೆಲ್ಲರ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಏಮ್ಸ್ ಮತ್ತು ಸೇನೆಯ ಆರ್‌ಆರ್‌ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ನೀಡಿದ ಅಸಾಧಾರಣ ಆರೈಕೆಗೆ ಧನ್ಯವಾದಗಳು. ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ’ ಎಂದು ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.