ADVERTISEMENT

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನ್ಮದಿನ: ಶುಭಾಶಯ ಕೋರಿದ ಉಪರಾಷ್ಟ್ರಪತಿ, ಪ್ರಧಾನಿ

ಪಿಟಿಐ
Published 1 ಅಕ್ಟೋಬರ್ 2021, 5:58 IST
Last Updated 1 ಅಕ್ಟೋಬರ್ 2021, 5:58 IST
ರಾಷ್ಟ್ರಪತಿ ರಾಮನಾಥ್ ಕೋವಿಂದ್‌
ರಾಷ್ಟ್ರಪತಿ ರಾಮನಾಥ್ ಕೋವಿಂದ್‌   

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಜನ್ಮದಿನದ ಅಂಗವಾಗಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟರ್‌ನಲ್ಲಿ ಶುಭಾಶಯ ಕೋರಿದ್ದಾರೆ.

‘ಗೌರವಾನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಅವರು ತಮ್ಮ ಸರಳತೆ, ಉನ್ನತ ನೈತಿಕ ಮೌಲ್ಯಗಳು ಮತ್ತು ದೂರದೃಷ್ಟಿಯ ಚಿಂತನೆಗಳಿಂದ ಹೆಸರುವಾಸಿಯಾಗಿದ್ದಾರೆ. ಈ ಜನ್ಮದಿನದ ಸಂದರ್ಭ ದಲ್ಲಿ ಅವರಿಗೆ ಉತ್ತಮ ಆರೋಗ್ಯ, ಸಂತೋಷ ದೊರೆಯಲಿ. ಇನ್ನೂ ಹಲವು ವರ್ಷಗಳ ಕಾಲ ದೇಶ ಸೇವೆಯಲ್ಲಿ ಮುಂದುವರಿಯಲಿ ಎಂದು ಹಾರೈಸುತ್ತೇನೆ‘ ಎಂದು ವೆಂಕಯ್ಯನಾಯ್ಡು ಟ್ವೀಟ್ ಮಾಡಿದ್ದಾರೆ.

ADVERTISEMENT

‘ರಾಮನಾಥ್ ಕೋವಿಂದ್ ಅವರು ಸಮಾಜದಲ್ಲಿನ ಬಡವರು ಮತ್ತು ಅವಕಾಶ ವಂಚಿತ ವರ್ಗಗಳ ಸಬಲೀಕರಣ ಕುರಿತ ಅವರ ಚಿಂತನೆಗಳು ಅನುಕರಣೀಯವಾಗಿವೆ. ಈ ಜನ್ಮ ದಿನದ ಸಂದರ್ಭದಲ್ಲಿ ಅವರು ಉತ್ತಮ ಆರೋಗ್ಯಕರ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‌ಅಕ್ಟೋಬರ್ 1, 1945ರಲ್ಲಿ ಉತ್ತರ ಪ್ರದೇಶದ ಕಾನ್ಪುರ್‌ ಜಿಲ್ಲೆಯ ಪರೌಂಖ್‌ ಹಳ್ಳಿಯಲ್ಲಿ ಜನಿಸಿದ ರಾಮನಾಥ್ ಕೋವಿಂದ ಅವರು, ಜುಲೈ 25,2017ರಂದು ದೇಶದ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.