ADVERTISEMENT

ಜಮ್ಮು–ಕಾಶ್ಮೀರ: ಸಂವಿಧಾನದ 370ನೇ ವಿಧಿ ತಿದ್ದುಪಡಿ ಬಗ್ಗೆ ರಾಷ್ಟ್ರಪತಿ ಅಧಿಸೂಚನೆ

ಜಮ್ಮು–ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 5:17 IST
Last Updated 7 ಆಗಸ್ಟ್ 2019, 5:17 IST
   

ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು ಪಡಿಸಲು ಗೃಹ ಸಚಿವಅಮಿತ್ ಶಾ ರಾಜ್ಯಸಭೆಯಲ್ಲಿ ಪ್ರಸ್ತಾವ ಮಂಡಿಸಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರಪತಿಗಳಸಂವಿಧಾನ ತಿದ್ದುಪಡಿ ಅಧಿಸೂಚನೆಗೆ ಸಂಬಂಧಿಸಿದ ಮಾಹಿತಿ ಪತ್ರವನ್ನು ಕಾನೂನು ಸಚಿವಾಲಯ ಬಿಡುಗಡೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿ 1954ರಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನೂ ತಿದ್ದುಪಡಿ ವ್ಯಾಪ್ತಿಗೆ ತರುವ ಬಗ್ಗೆ ರಾಷ್ಟ್ರಪತಿಗಳ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

‘ಸಂವಿಧಾನದಲ್ಲಿರುವ ಎಲ್ಲ ನಿಬಂಧನೆಗಳೂಕಾಲಕ್ಕೆ ತಕ್ಕಂತೆ ತಿದ್ದುಪಡಿಗೆ ಒಳಗಾಗುತ್ತಿವೆ. ಆದರೆ, ಇದಕ್ಕೆ ಜಮ್ಮು ಮತ್ತು ಕಾಶ್ಮೀರ ಹೊರತಾಗಿದೆ. ಕಾಲಕ್ಕೆ ಅನುಗುಣವಾಗಿ ತಿದ್ದುಪಡಿ ಮಾಡುವ ವ್ಯಾಪ್ತಿಗೆ 367ನೇ ವಿಧಿ ಮತ್ತು 370ನೇ ವಿಧಿಯೂ ಒಳಗೊಳ್ಳಬೇಕು’ ಎಂದು ರಾಷ್ಟ್ರಪತಿಗಳ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಕೇಂದ್ರಾಡಳಿತ ಪ್ರದೇಶಕ್ಕೆ ಪ‍್ರಸ್ತಾವ

ಲಡಾಖ್ ಅನ್ನು ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿ, ಜಮ್ಮು ಮತ್ತು ಕಾಶ್ಮೀರವನ್ನು ವಿಧಾನಸಭೆ ಸಹಿತ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವ ಬಗ್ಗೆಯೂ ಗೃಹ ಸಚಿವ ಅಮಿತ್ ಶಾ ಪ್ರಸ್ತಾವ ಮಂಡಿಸಿದ್ದಾರೆ.

ಭೌಗೋಳಿಕವಾಗಿ ಭಿನ್ನವಾಗಿರುವ ಲಡಾಖ್‌ಗೆ ಕೇಂದ್ರಾಡಳಿತ ಸ್ಥಾನಮಾನ ನೀಡುವ ಕುರಿತ ಅಲ್ಲಿನ ಜನರ ಬೇಡಿಕೆ ದೀರ್ಘಾವಧಿಯಿಂದ ಬಾಕಿ ಇದೆ. ಹೀಗಾಗಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು. ಆಂತರಿಕ ಭದ್ರತೆ, ಜಮ್ಮು ಮತ್ತು ಕಾಶ್ಮೀರ ಎದುರಿಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಗಮನದಲ್ಲಿಟ್ಟುಕೊಂಡು ರಾಜ್ಯವನ್ನು ವಿಧಾನಸಭೆ ಸಹಿತ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಅಮಿತ್ ಶಾ ಪ್ರಸ್ತಾವದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.