ADVERTISEMENT

‘ಜೇಟ್ಲಿ ಸ್ಥಿತಿ ಗಂಭೀರ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 19:36 IST
Last Updated 16 ಆಗಸ್ಟ್ 2019, 19:36 IST
   

ನವದೆಹಲಿ : ತೀವ್ರ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿ, ಜೇಟ್ಲಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸಹ ರಾಷ್ಟ್ರಪತಿಯ ಜತೆಗಿದ್ದರು.

ಶುಕ್ರವಾರ ತಡರಾತ್ರಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಜೇಟ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ತಜ್ಞವೈದ್ಯರ ತಂಡದ ಜತೆಗೆ ಅಮಿತ್ ಶಾ ಅವರು ಚರ್ಚೆನಡೆಸಿದರು.

ADVERTISEMENT

ಆಗಸ್ಟ್‌ 9ರಂದು ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಅಂದಿನಿಂದಲೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಆದರೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯು ಈವರೆಗೆ ಅಧಿಕೃತ ವರದಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.